ಪುತ್ತೂರು : ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಗುರು ತಾರಾನಾಥ ಸವಣೂರುರವರಿಗೆ ಸನ್ಮಾನ ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ರಾಯಿರವರು ಸನ್ಮಾನಿಸಿದರು. ದ.ಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಸೇರಿದಂತೆ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರು,ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.