ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ದಾಮೋದರ ಕಣಜಾಲು

0

ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ದಾಮೋದರ ಕಣಜಾಲು ರವರು ಅಧಿಕಾರ ಸ್ವೀಕರಿಸಿದ್ದಾರೆ. ಆ. 30 ರಂದು ಡಾ. ವರದರಾಜ ಚಂದ್ರಗಿರಿಯವರು ನಿವೃತ್ತಿಗೊಂಡ ಬಳಿಕ ಅವರ ತೆರವಾದ ಸ್ಥಾನಕ್ಕೆ ದಾಮೋದರ ಕಣಜಾಲು ರವರು ನೇಮಕಗೊಂಡಿದ್ದಾರೆ.

1991 ಬೆಳ್ಳಾರೆಯಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿರುವ ದಾಮೋದರ ರವರು ಕುಂದಾಪುರ ತಾಲೂಕಿನ ಬೈಂದೂರು, ಬೆಟ್ಟಂಪಾಡಿಯಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೋವಿಡ್ ಸಮಯದಲ್ಲಿ ಹೆಚ್ಚುವರಿ ಕರ್ತವ್ಯದಲ್ಲಿ ಬೆಟ್ಟಂಪಾಡಿಯಲ್ಲಿ ಕಾರ್ಯನಿರ್ವಹಿಸಿದ್ದ ಇವರು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಭಡ್ತಿಗೊಂಡು ಬಳಿಕ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು, ಬೆಳ್ಳಾರೆ ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ಬೆಳ್ಳಾರೆಯಿಂದ ಬೆಟ್ಟಂಪಾಡಿಗೆ ವರ್ಗಾವಣೆಗೊಂಡು ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.


ಡಾ. ದಾಮೋದರ ಕಣಜಾಲು ರವರು ಮೂಲತಃ ಸುಳ್ಯ ಕನಕಮಜಲು ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.ಪತ್ನಿ ರಶ್ಮಿ ಪಿ.ಎಸ್. ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ಪುತ್ರ ಮನ್ವಿತ್ ಕಣಜಾಲುರವರು ಗೋವಾ ಬಿಡ್ಸ್ ನಲ್ಲಿ ಇಂಜಿನಿಯರ್ ಆಗಿದ್ದಾರೆ. ಕಿರಿಯ ಪುತ್ರ ಗಮನ್ ಕಣಜಾಲು ವಿವೇಕಾನಂದ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here