ನೆಲ್ಯಾಡಿ: ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಹ್ಯಾಂಡ್ ಬಾಲ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಹಯೋಗದೊಂದಿಗೆ ನಡೆಯಿತು.
ಈ ಕ್ರೀಡಾಕೂಟದಲ್ಲಿ ಎಸ್‌ಡಿಎಮ್ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಹಾಗೂ ಶಾಲೆಯ 14ರ ವಯೋಮಾನದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸಂಸ್ಥೆಯ ಒಟ್ಟು 25 ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ರಮೇಶ್ ಮಯ್ಯ ತಿಳಿಸಿದ್ದಾರೆ.