ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಸಂಬಂಧಿಸಿ ಮಾಸ್ಟರ್ ಪ್ಲ್ಯಾನ್ ತಯಾರಿಸಲು ಸರ್ವೆ ಕಾರ್ಯಕ್ಕೆ ಸೆ.15ರಂದು ಚಾಲನೆ ನೀಡಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತೆಂಗಿನಕಾಯಿ ಒಡೆಯುವ ಮೂಲಕ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ದೇವಸ್ಥಾನ ಅಭಿವೃದ್ಧಿ ಕಾರ್ಯಗಳಿಗೆ ಸಿದ್ಧತೆ ನಡೆಯುತ್ತಿದೆ. ಪುಷ್ಕರಣಿಯ ಅಭಿವೃದ್ಧಿಗೆ ಸಂಬಂಧಿಸಿ ಕೆರೆಯ ನೀರಿನ ಮಟ್ಟ, ಸುತ್ತಲಿನ ಅಭಿವೃದ್ಧಿ ಕಾರ್ಯದಲ್ಲಿ ಸರ್ವೇ ಕಾರ್ಯ ನಡೆಯಲಿದೆ ಎಂದವರು ಹೇಳಿದರು.
ಈ ಸಂದರ್ಭ ಭೂಮಾಪಕ ರಾಜಶೇಖರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಸಿಬ್ಬಂದಿ ಪದ್ಮನಾಭ ಉಪಸ್ಥಿತರಿದ್ದರು.