ಪುತ್ತೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪುತ್ತೂರು ಪುರಸಭೆಯಲ್ಲಿ 6ರಿಂದ 8ನೇ ತರಗತಿಯ ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ನನ್ನ ಮತ ನನ್ನ ಹಕ್ಕು ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತಾ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದ್ವಿತ್ ಜಿ ದ್ವಿತೀಯ ಬಹುಮಾನ ಪಡೆದುಕೊಂಡಿರುತ್ತಾರೆ.
ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ, ಸುಂದರ್ ತರಬೇತಿ ನೀಡಿರುತ್ತಾರೆ.