ಪುತ್ತೂರು: ದೇರಳಕಟ್ಟೆಯಲ್ಲಿ ಸೆ.14ರಂದು ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಝುನೈಫ್ ಕೋಲ್ಪೆಯವರಿಗರ ‘ಭಾವೈಕ್ಯತಾ ಸಾಹಿತ್ಯ ರತ್ನ’ ಪ್ರಶಸ್ತಿ ಲಭಿಸಿದೆ.

ಜಿಲ್ಲೆಯ ಹಲವು ವಿದ್ಯಾ ಸಂಸ್ಥೆಗಳಲ್ಲಿ ಸಾಹಿತ್ಯ ಕುರಿತು ಕಾರ್ಯಾಗಾರ ನಡೆಸಿರುವ ಝುನೈಫ್ ಕೋಲ್ಪೆಯವರು ಬರಹಗಾರರಾಗಿದ್ದು ಕವಿಗೋಷ್ಠಿ, ಚರ್ಚೆ, ವಿಚಾರ ಗೋಷ್ಠಿಯಲ್ಲಿ ಭಾಗವಹಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಚರ್ಚೆ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಯುವಧ್ವನಿ ಡಿಬೇಟ್ ಕ್ಲಬ್ ಬೆಂಗಳೂರು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಉಡುಪಿ ಜಿಲ್ಲೆ ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ೧೦೦ಕ್ಕೂ ಮಿಕ್ಕ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಪ್ರಸ್ತುತ ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್‌ನಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.