ವಿದ್ಯಾರ್ಥಿನಿ ಮೇಲೆ ದಾಳಿ ನಡೆಸಿದ ಬಳಿಕ ಹೆಚ್ಚಿದ ಆತಂಕ
ಪುತ್ತೂರು: ಮುಂಡೂರು ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿರುವ ಘಟನೆ ವರದಿಯಾಗಿದೆ.
ಮುಂಡೂರು ಪೇಟೆಯಲ್ಲಿರುವ ಗ್ರಾಮ ಆಡಳಿತಾಧಿಕಾರಿ ಕಚೇರಿ, ಮುಂಡೂರು ಗ್ರಾ.ಪಂ ಎದುರು ಹಾಗೂ ಮುಂಡೂರು ಪ್ರಾಥಮಿಕ ಶಾಲೆಯ ಬಳಿ ಹೆಚ್ಚಾಗಿ ನಾಯಿಗಳ ಹಿಂಡು ಕಂಡು ಬರುತ್ತಿದ್ದು ಸಾರ್ವಜನಿಕರು ಆತಂಕದಲ್ಲೇ ನಡೆದಾಡುವ ಸನ್ನಿವೇಶ ನಿರ್ಮಾಣವಾಗಿದೆ. ಕೆಲವು ದಿನಗಳ ಹಿಂದೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು ವಿದ್ಯಾರ್ಥಿನಿಯ ಮೇಲೆರಗಿದ್ದು ಅಲ್ಪದರಲ್ಲೇ ಪಾರಾಗಿದ್ದರು. ಇತರ ಕೆಲವು ವಿದ್ಯಾರ್ಥಿಗಳನ್ನೂ ಬೀದಿ ನಾಯಿ ಅಟ್ಟಾಡಿಸಿಕೊಂಡು ಹೋಗಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಬೀದಿನಾಯಿಗಳ ಹಾವಳಿ ಬಗ್ಗೆ ಇತ್ತೀಚೆಗೆ ನಡೆದ ಮುಂಡೂರು ಗ್ರಾ.ಪಂ ಸಾಮಾನ್ಯ ಸಭೆಯಲ್ಲೂ ವಿಚಾರ ಪ್ರಸ್ತಾಪಗೊಂಡಿತ್ತು. ಮಕ್ಕಳಿಗೆ ಮತ್ತು ವಯೋವೃದ್ದರಿಗೆ ಬಿದಿನಾಯಿ ಹಾವಳಿಯಿಂದ ಹೆಚ್ಚಿನ ಸಮಸ್ಯೆ ಉಂಟಾಗಿದ್ದು ಪೇಟೆಯಲ್ಲಿ ನಡೆದುಕೊಂಡು ಹೋಗಲು ಹೆದರುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೀದಿನಾಯಿಗಳನ್ನು ಸ್ಥಳಾಂತರ ಮಾಡುವ ಕಾರ್ಯ ಆಗಬೇಕಾಗಿದೆ ಎಂದು ಮುಂಡೂರು ಗ್ರಾ.ಪಂ ಸದಸ್ಯ ಉಮೇಶ್ ಗೌಟ ಅಂಬಟ ತಿಳಿಸಿದ್ದಾರೆ.