ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ, ಅವರ ಹಾಗೂ ದೇಶದ ಯಶಸ್ಸಿಗೆ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಪ್ರಕೋಷ್ಠದ ಸದಸ್ಯ ದಿನೇಶ್ ಮೆದು, ಸುಳ್ಯ ಮಂಡಲ ಸಮಿತಿ ಸದಸ್ಯ ತಾರನಾಥ ಕಾಯರ್ಗ, ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಚೇತನ್ ಕುಮಾರ್ ಕೋಡಿಬೈಲು. ಬೂತ್ ಸಂಖ್ಯೆ 65 ರ ಕಾರ್ಯದರ್ಶಿ ಸತೀಶ್ ಬಲ್ಯಾಯ, ಎಸ್ ಟಿ ಮೋರ್ಚಾದ ಸದಸ್ಯ ಶೇಸಪ್ಪ ನಾಯ್ಕ ಉಪಸ್ಥಿತರಿದ್ದರು.