ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಭಿವೃದ್ಧಿಯ ಬಗ್ಗೆ ಸಮಾಲೋಚಿಸಲು ಸಮಾಜ ಬಾಂಧವರ ಸಭೆ ಸೆ.21ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಭಾಭವನದಲ್ಲಿ ನಡೆಯಲಿದೆ.
ಕ್ಷೇತ್ರ ಬೆಳಗಿದರೆ ನಮ್ಮೆಲ್ಲರ ಮನೆ ಬೆಳಗುತ್ತದೆ ಎಂಬ ಚಿಂತನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಸೇರಿ ಸಲಹೆ ಸೂಚನೆ ನೀಡಿ ಸಭೆ ಯಶಸ್ವಿ ಗೊಳಿಸಬೇಕು ಎಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್. ಕೆ.ಬಿ., ಶ್ರೀ ಕ್ಷೇತ್ರ ಗೆಜ್ಜೆಗಿರಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಮತ್ತು ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ತಿಳಿಸಿದ್ದಾರೆ.