ಮುಂದಿನ ಶೈಕ್ಷಣಿಕ ವರ್ಷದಿಂದ ಕೊಯಿಲ ಪಶು ವೈದ್ಯಕೀಯ ಕಾಲೇಜು ಆರಂಭಿಸುವಂತೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಕೊಯಿಲದ ಪಶು ವೈದ್ಯಕೀಯ ಕಾಲೇಜು ಪ್ರಾರಂಭ ಮಾಡುವಂತೆ ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.


ಶುಕ್ರವಾರ ಮೀನುಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ರವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ ಅವರು, ಈಗಾಗಲೇ ಕೊಯಿಲದಲ್ಲಿರುವ ಪಶು ವೈದ್ಯಕೀಯ ಕಾಲೇಜು ಪ್ರಾರಂಭ ಮಾಡುವ ನಿಟ್ಟಿನಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ನೆನೆಗುದಿಗೆ ಬಿದ್ದಿದ್ದ ಈ ಕಾಲೇಜು ಕಟ್ಟಡವನ್ನು ರಾಜ್ಯ ಸರಕಾರ ಅಭಿವೃದ್ದಿ ಮಾಡಿದ್ದು, ಕಾಲೇಜು ಆರಂಭಕ್ಕೆ ಇನ್ನು ಯಾವುದೇ ಅಡೆತಡೆಗಳಿಲ್ಲದ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಕಾಲೇಜು ಪ್ರಾರಂಭ ಮಾಡುವಲ್ಲಿ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಾಸಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here