ನಿಡ್ಪಳ್ಳಿ; ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಾಣಾಜೆ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಸೆ.20 ರಂದು ಬೆಳಿಗ್ಗೆಯಿಂದ ನಿಡ್ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.
ಆದುದರಿಂದ ಗ್ರಾಮದ ಎಲ್ಲಾ ಸಾರ್ವಜನಿಕರು ತಮ್ಮ ನಾಯಿಗಳನ್ನು ತಮಗೆ ಹತ್ತಿರ ಇರುವ ಲಸಿಕಾ ಶಿಬಿರಕ್ಕೆ ತಂದು ಇದರ ಸದುಪಯೋಗ ಪಡೆದುಕೊಳ್ಳಲು ಪಂಚಾಯತ್ ಪ್ರಕಟಣೆ ತಿಳಿಸಿದೆ.