ನಾಳೆ(ಸೆ.21) ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ಪದಾಧಿಕಾರಿಗಳ ಪದಗ್ರಹಣ

0

ಪುತ್ತೂರು:ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ನೀರ್ಪಾಡಿ ಹಾಗೂ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ.21ರಂದು ಎಪಿಎಂಸಿ ರಸ್ತೆಯ ಬ್ಲಾಕ್ ಕಾಂಗ್ರೆಸ್ ಕಚೇರಿಯ ಬಳಿಯ ವಿದ್ಯಾಮಾತಾ ಸಭಾಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈಯವರ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ದ.ಕ ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಗ್ರಾಮೀಣ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಉಷಾ ಅಂಚನ್, ಉದ್ಯಮಿ ಸುಮಾ ಅಶೋಕ್ ರೈ ಹಾಗೂ ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಎನ್.ವಿ ಡ್ಯಾನ್ಸ್ ಸ್ಟುಡಿಯೋ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ.


ಶಾಸಕ ಅಶೋಕ್ ಕುಮಾರ್ ರೈಯವರ ಸೂಚನೆಯಂತೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾ ಅಂಚನ್‌ರವರ ಆದೇಶದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆಯನ್ನಾಗಿ ಚಂದ್ರಪ್ರಭಾ ಗೌಡರವರನ್ನು ನೇಮಕಗೊಳಿಸಿದ್ದಾರೆ. ಚಂದ್ರಪ್ರಭಾ ಗೌಡರು ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದಾರೆ. ಪ್ರಸ್ತುತ ಬ್ಲಾಕ್ ಕಾಂಗ್ರೆಸ್‌ನ ವಕ್ತಾರೆಯಾಗಿರುತ್ತಾರೆ. ನಿವೃತ್ತ ಯೋಧ ದಯಾನಂದ ಗೌಡ ನೀರ್ಪಾಡಿಯವರ ಪತ್ನಿ. ಪ್ರಸ್ತುತ ಇವರು ಸಾಲ್ಮರ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here