ರಾಮಕುಂಜ: ಕೊಯಿಲ ಗ್ರಾಮದ ವಳಕಡಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಡಬ ಸರಕಾರಿ ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನಡೆಯಿತು.
ಮಾಜಿ ಶಾಸಕ ಸಂಜೀವ ಮಠಂದೂರು ಅವರು ಶಿಬಿರ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ರೂಢಿಸಿ, ರಾಷ್ಟ್ರಾಭಿಮಾನವನ್ನು ಮೂಡಿಸುವುದರ ಜೊತೆಗೆ ದೇಶ ಕಟ್ಟವ ಕಾಯಕಕ್ಕೆ ಯುವಜನತೆಗೆ ಪ್ರೇರಣೆ ನೀಡುತ್ತದೆ ಎಂದರು. ಅತಿಥಿಯಾಗಿದ್ದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿದ್ದು ಬದುಕು ರೂಪಿಸಿಕೊಳ್ಳಬೇಕು. ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಿನ್ಸಿಪಾಲ್ ಡಿ.ದೇವರಾಜು ಅಧ್ಯಕ್ಷತೆವಹಿಸಿದ್ದರು. ಪತ್ರಕರ್ತ ಕೆ.ಎಸ್.ಬಾಲಕೃಷ್ಣ ಕೊಯಿಲ, ರಾಮಕುಂಜ ಕ್ಲಸ್ಟರ್ ಸಿಆರ್‌ಪಿ ಮಹೇಶ್ ಎಂ., ಎ.ಪಿ.ಎಂ.ಸಿ ಮಾಜಿ ನಿರ್ದೇಶಕ ಶೀನಪ್ಪ ಗೌಡ ವಳಕಡಮ, ಯುವಜನ ಒಕ್ಕೂಟದ ಕಡಬ ತಾಲೂಕು ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಶುಭ ಹಾರೈಸಿದರು. ಕೊಯಿಲ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ ಸುಭಾಸ್ ಶೆಟ್ಟಿ, ಸದಸ್ಯರಾದ ಚಂದ್ರಶೇಖರ ಗೌಡ ಮಾಳ, ಲತಾ, ಕಮಲಾಕ್ಷಿ, ಮಾಜಿ ಸದಸ್ಯ ವಿನೋಧರ ಗೌಡ ಮಾಳ, ಎಸ್‌ಡಿಎಂಸಿ ಅಧ್ಯಕ್ಷ ಯು.ರಾಮಣ್ಣ ಗೌಡ, ಶಾಲಾ ಮುಖ್ಯ ಶಿಕ್ಷಕ ಪಿ.ಎಸ್. ನಾರಾಯಣ ಭಟ್, ಶಿಬಿರದ ಸಂಚಾಲಕ ಮೋಹನ್ ದಾಸ್ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೋವಿತ್, ಶಿಬಿರದ ಸಹಾಯಕ ನಿರ್ದೆಶಕ ವಾಸುದೇವ ಗೌಡ ಕೆ., ಘಟಕದ ನಾಯಕರಾದ ಅರ್ಪಿತ್, ದೀಪಿಕಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಾಧಿಕಾರಿ ಸಲೀನ್ ಕೆ.ಪಿ. ಪ್ರಸ್ತಾವನೆಗೈದರು. ವಳಕಡಮ ಶಾಲಾ ಶಿಕ್ಷಕಿ ಸಂಧ್ಯಾ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕಿ ಪೂರ್ಣಿi ವಂದಿಸಿದರು. ಉಪನ್ಯಾಸಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಶೀನಪ್ಪ ಗೌಡ ವಳಕಡಮ ಧ್ವಜಾರೋಹಣ ನೆರವೇರಿಸಿದರು. ರಾಮಣ್ಣ ಗೌಡ ಶ್ರಮದಾನಕ್ಕೆ ಚಾಲನೆ ನೀಡಿದರು.