ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಮೊಟ್ಟೆತ್ತಡ್ಕ ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೆ.22 ರಿಂದ ಅ.1 ರವರೆಗೆ ಸಾರ್ವಜನಿಕ ನವರಾತ್ರಿ ಉತ್ಸವವು ನಡೆಯಲಿರುವುದು.
ಸೆ.22ರಂದು ಬೆಳಿಗ್ಗೆ ಮಹಾ ಗಣಪತಿ ಹೋಮ, ಸೆ.22 ರಿಂದ ಅ.1ರವರೆಗೆ ಪ್ರತಿದಿನ ಸಂಜೆ ಭಜನಾ ಸಂಕೀರ್ತನೆ ಬಳಿಕ ಮಹಾಪೂಜೆ ನೆರವೇರಲಿರುವುದು. ಅ.2 ರಂದು ಬೆಳಿಗ್ಗೆ ಅಕ್ಷರಾಭ್ಯಾಸ, ವಿಜಯದಶಮಿ ಪೂಜೆ, ಪ್ರಸಾದ ವಿತರಣೆ, ನವಾನ್ನ ಭೋಜನ ಜರಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರದ್ಧಾಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಮೇಶ್ ರೈ ಮಿಶನ್ ಮೂಲೆ, ಅಧ್ಯಕ್ಷ ರಾಮ ಶೆಟ್ಟಿ, ಲೆಕ್ಕ ಪರಿಶೋಧಕ ವಿಶ್ವನಾಥ ರೈ ಮಿಶನ್ ಮೂಲೆ, ಕಾರ್ಯದರ್ಶಿ ಕೆ.ಬಿ ಶೇಖರ, ಉಪಾಧ್ಯಕ್ಷರಾದ ಸಂತೋಷ್ ಕುಮಾರ್, ಸತೀಶ್ ಎಂ, ಜೊತೆ ಕಾರ್ಯದರ್ಶಿಗಳಾದ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ, ಕೋಶಾಧಿಕಾರಿ ಮೋಹನ್ ಕುಮಾರ್ ಡಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.