ನೆಲ್ಯಾಡಿ: ಲಾರಿ ಪಲ್ಟಿಯಾಗಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಸೆ.21ರಂದು ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿಗಳು ಮತ್ತು ಸ್ಥಳೀಯರು ಗಾಯಾಳುಗಳನ್ನು ಉಪಚರಿಸಿ ಆಸ್ಪತ್ರೆಗೆ ಕರೆದೊಯ್ಯಲು ಸಹಕಾರ ನೀಡಿದರು ಎಂದು ವರದಿಯಾಗಿದೆ.