ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯ ನೇತೃತ್ವದಲ್ಲಿ ಪುತ್ತೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂಣೇಶ್ವರಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಅ.4ರ ತನಕ ನಡೆಯುವ ಶ್ರೀ ಗಣಪತಿ, ಶಾರದೆ, ನವದುರ್ಗೆಯರ ಸಹಿತ ಪುತ್ತೂರು ದಸರಾ ಮಹೋತ್ಸವದಲ್ಲಿ ಸೆ.22ರಂದು ರಂದು ಗಣಪತಿ, ನವದುರ್ಗೆಯರ ವಿಗ್ರಹಪ್ರತಿಷ್ಠೆ ನಡೆಯಿತು.
ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ನಡೆಯುವ ವೈದಿಕ ಕಾರ್ಯಕ್ರಮದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತ ಎಂ, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಆರ್ಯಾಪು ಪ್ರಾಥಮಿಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ಅವರು ಜೊತೆಯಾಗಿ ದೀಪ ಪ್ರಜ್ವಲನೆಯೊಂದಿಗೆ ಪುತ್ತೂರು ದಸರಾರವನ್ನು ಉದ್ಘಾಟಿಸಿದರು.
ಈ ಸಂದರ್ಭ ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಾರ್ಯಾಧ್ಯಕ್ಷ ಟಿ.ರಂಗನಾಥ ರಾವ್, ಪ್ರಧಾನ ಕಾರ್ಯದರ್ಶಿ ಗಣೇಶ ಮಡಿವಾಳ, ಕೋಶಾಧಿಕಾರಿ ಉಮೇಶ್ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಸತೀಶ್ ಕುಲಾಲ್, ಗೌರವ ಸಲಹೆಗಾರರಾದ ಮಂಜಪ್ಪ ರೈ ಬಾರಿಕೆ, ಯು ಲೋಕೇಶ್ ಹೆಗ್ಡೆ, ದಯಾನಂದ ಕುಂಟ್ಯಾನ, ಸಹ ಸಂಚಾಲಕರಾದ ರಾಜೇಶ್ ಬನ್ನೂರು, ಜಯಂತ ಶೆಟ್ಟಿ ಕಂಬಳತ್ತಡ್ಡ, ಸಾಂಸ್ಕೃತಿಕ ಕಾರ್ಯಕ್ರಮದ ಸಂಚಾಲಕ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಸವಿತಾ ಕುಕ್ಕಾಡಿ, ಜಯಲಕ್ಷ್ಮೀ ಉದಯಗಿರಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.