ವಿಟ್ಲ: ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಇಪ್ಪತ್ತರಾನೇ ವರ್ಷದ ಶರನ್ನವರಾತ್ರಿ ಉತ್ಸವವು ಕೊಪ್ಪರಿಗೆ ಮೂಹೂರ್ತದೊಂದಿಗೆ ಆರಂಭಗೊಂಡಿತು.

ಟ್ರಸ್ಟಿಗಳಾದ ತಾರಾನಾಥ ಕೊಟ್ಟಾರಿ, ಚಂದ್ರಶೇಖರ ಮೂಲ್ಯ, ಮಹಾಲಕ್ಷಿ ಮಹಿಳಾ ಸಮಿತಿ ಗೌರವಾಧ್ಯಕ್ಷರಾದ ರೇವತಿ ಪೆರ್ನೆ, ಅಧ್ಯಕ್ಷರಾದ ವನಿತಾ ವಿ ಶೆಟ್ಟಿ,ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ಮಹಾಗಣಪತಿ ಹೋಮ, ಚಂಡಿಕಾ ಹೋಮ ಜರಗಿತು. ಶ್ರೀ ದುರ್ಗಾ ಮಹಾಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಊರ-ಪರಊರ ಭಕ್ತಾದಿಗಳು ಉಪಸ್ಥಿತರಿದ್ದರು.