ಹೃದಯಾಘಾತದಿಂದ ಯುವಕ ಮೃತ್ಯು

0

ಪುತ್ತೂರು: ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ (23ವ.) ಹೃದಯಾಘಾತದಿಂದ ಮೈಸೂರಿನಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು.

ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಕಡಿಮೆಯಾಗಿತ್ತು. ಭಾನುವಾರ ರಾತ್ರಿ ತನ್ನ ರೂಂನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅವಿವಾಹಿತರಾಗಿದ್ದ ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here