ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ದಾರದ ಪ್ರಯುಕ್ತ ಮತ್ತು ಲೋಕಕಲ್ಯಾಣಾರ್ಥವಾಗಿ ಆ.23ರಂದು ನಡೆಯಲಿರುವ ಶ್ರೀ ಚಂಡಿಕಾಯಾಗದ ಆಮಂತ್ರಣ ಪತ್ರಿಕೆಯನ್ನು ಸೆ.22ರಂದು ಕ್ಷೇತ್ರದಲ್ಲಿ ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಯ ಮೊಕ್ತೇಸರರಾದ ಜನೇಶ್ ಭಟ್ ಬರೆಪ್ಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜತ್ತಪ್ಪ ರೈ ಬರೆಪ್ಪಾಡಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.