ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಣಾಲು ಸಹಯೋಗದಲ್ಲಿ ನಡೆದ 17ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದ ತರಬೇತುದಾರರಾಗಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ, ಹರಿಣಾಕ್ಷಿ ಹಾಗೂ ಹಿರಿಯ ವಿದ್ಯಾರ್ಥಿ ಎನ್.ಐ.ಎಸ್ ತರಬೇತುದಾರರಾದ ಕಾರ್ತಿಕ್ ಇವರು ಮಾರ್ಗದರ್ಶನ ನೀಡಿರುತ್ತಾರೆ. ಶಾಲಾ ತಂಡಗಳಿಗೆ ಶಿಕ್ಷಕ ವೃಂದ, ಮುಖ್ಯ ಗುರುಗಳು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.
