ವಿಟ್ಲ: ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿಯ ಮನೆಗೆ ಬಂದ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸ್ಥಳೀಯ ನಿವಾಸಿ ನಾರಾಯಣ (42) ಎಂಬಾತ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.