ಸೆ.26:ರೋಟರಿ ಬಿರುಮಲೆ ಹಿಲ್ಸ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಪುತ್ತೂರು ಸಂಸ್ಥೆಗೆ ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆರವರು ಸೆ.26 ರಂದು ಮಧ್ಯಾಹ್ನ ಅಧಿಕೃತ ಭೇಟಿ ನೀಡಲಿದ್ದು ಕಾರ್ಯಕ್ರಮವು ಮನೀಷಾ ಸಭಾಂಗಣದಲ್ಲಿ ಜರಗಲಿದೆ.

ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಪ್ರಮೋದ್ ಕುಮಾರ್, ವಲಯ ಸೇನಾನಿ ಶಶಿಧರ್ ಬೆಳ್ಳಾರೆರವರು ಈ ಸಂದರ್ಭದಲ್ಲಿ ಉಪಸ್ಥಿತಲಿರುವರು ಎಂದು ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಪುತ್ತೂರು ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಾರ್ಯದರ್ಶಿ ರುಕ್ಮಯ ಕುಲಾಲ್, ಕೋಶಾಧಿಕಾರಿ ಪುರುಷೋತ್ತಮ ಪ್ರಭುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here