ಪುತ್ತೂರು: ಸೆ.28ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಪುತ್ತೂರ್ದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಆಗಮಿಸಿದ ಎಡನೀರು ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಆರಂಭದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ತುಳಸಿ ಮಾಲೆ ಅರ್ಪಣೆ ಮಾಡಿ ಸ್ವಾಗತಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿನಯ ಸುವರ್ಣ ಮತ್ತು ಸುಭಾಶ್ ರೈ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.