ನೆಲ್ಯಾಡಿ: ಕಳೆದ 32 ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಜತ್ತೂರು ಗ್ರಾಮದ ನೀರಕಟ್ಟೆ ನಿವಾಸಿ ಎನ್.ನಾರಾಯಣ ಪೂಜಾರಿ ಅವರು ಸೆ.30ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ.
ಇವರು 1992ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದರು. ಪ್ರಸ್ತುತ ಪುತ್ತೂರು ವಿಭಾಗದ ಬಿ.ಸಿ.ರೋಡ್ ಘಟಕದಲ್ಲಿ ಹಿರಿಯ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 32 ವರ್ಷ ಕರ್ತವ್ಯ ನಿರ್ವಹಿಸಿರುವ ಇವರು ಸೆ.30ರಂದು ನಿವೃತ್ತಿಯಾಗಲಿದ್ದಾರೆ.