ಪುತ್ತೂರು: ನವರಾತ್ರಿ ಉತ್ಸವದ ಸಂಭ್ರಮದಲ್ಲಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಉದ್ಯಮಿ ದಿವಾಕರ ದಾಸ್ ನೇರ್ಲಾಜೆ ಅವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಳದಲ್ಲಿ ಶ್ರೀ ದೇವಿಗೆ ನಿರ್ಮಾಣವಾಗಲಿರುವ ಸ್ವರ್ಣಕವಚಕ್ಕೆ ಎರಡು ಲಕ್ಷ ರೂ ನೀಡುವುದಾಗಿ ವಾಗ್ದಾನ ನೀಡಿದ ಅವರು 50 ಸಾವಿರ ರೂ ಮುಂಗಡವಾಗಿ ನೀಡಿದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು, ಉದ್ಯಮಿ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಮತ್ತಿತರರು ಉಪಸ್ಥಿತರಿದ್ದರು.