ಪುತ್ತೂರು:ಪುತ್ತೂರಿನ ಶ್ರೀ ಪ್ರಗತಿ ವಿಸ್ತಾರ ಏವಿಯೇಶನ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜ್‌ನಲ್ಲಿ ಸೆ.29ರಂದು ಗಣಪತಿ ಹವನ, ಶಾರದಾ ಪೂಜೆ ಹಾಗೂ ಪ್ರಥಮ ವಾರ್ಷಿಕೋತ್ಸವದ ಸಂಭ್ರಮ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಗಣಪತಿ ಹೋಮ, ವಿದ್ಯಾದೇವಿ ಶಾರದ ಪೂಜೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಹೇಮಾವತಿ ಸುದರ್ಶನ್,ಕೋಶಾಧಿಕಾರಿ ಸುದರ್ಶನ್ ಮೂಡಬಿದಿರಿ, ಉಪಾಧ್ಯಕ್ಷೆ ಹೇಮಲತ ಗೋಕುಲ್‌ನಾಥ್ ಹಾಗೂ ಕಾರ್ಯದರ್ಶಿ ಗೋಕುಲ್‌ನಾಥ್ ಪಿ.ವಿ. ,ಸಂಸ್ಥೆಯ ಪ್ರಾಂಶುಪಾಲೆ ಮಾಧವಿ ಎನ್.ಸಿ., ಆಡಳಿತ ಅಧಿಕಾರಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಮಾತನಾಡಿ, ಒಂದೇ ವರ್ಷದಲ್ಲಿ ಕಾಲೇಜು ಸಾಧಿಸಿರುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳ ಶ್ರಮ ಹಾಗೂ ಅಧ್ಯಾಪಕರ ಮಾರ್ಗದರ್ಶನದಿಂದ ಕಾಲೇಜು ಶೀಘ್ರದಲ್ಲೇ ಉತ್ತಮ ಹೆಸರನ್ನು ಗಳಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.