ಪುತ್ತೂರು: ದ.ಕ ಮತ್ತು ಉಡುಪಿ ಜಿಲ್ಲಾ ಜಂಇಯ್ಯತ್ತುಲ್ ಫಲಾಹ್ ನ 2025-27ನೇ ಸಾಲಿನ ನೂತನ ಉಪಾಧ್ಯಕ್ಷರಾಗಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿ ಆಯ್ಕೆಯಾಗಿದ್ದಾರೆ.
ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿಯ ಜಂಇಯ್ಯತ್ತುಲ್ ಫಲಾಹ್ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಲ್.ಟಿ. ಅಬ್ದುಲ್ ರಝಾಕ್ ಹಾಜಿಯವರು ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು ಜಂಇಯ್ಯತ್ತುಲ್ ಫಲಾಹ್ ಪುತ್ತೂರು ಘಟಕದ ಕೋಶಾಧಿಕಾರಿಯಾಗಿ ಮತ್ತು ಸೀರತ್ ಕಮಿಟಿ ಪುತ್ತೂರು ಇದರ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಮಾಜಿ ಅಧ್ಯಕ್ಷರಾಗಿರುವ ಎಲ್.ಟಿ. ಅಬ್ದುಲ್ ರಝಾಕ್ ಹಾಜಿಯವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.