ಸಿಎಂ ಸಿದ್ಧರಾಮಯ್ಯ ಭಾಗವಹಿಸುವಿಕೆ ಜೊತೆಗೆ 1 ಲಕ್ಷ ಜನ ಸೇರುವ ನಿರೀಕ್ಷೆ-ನಿರಂಜನ್ ರೈ
ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಶೋಕ ಜನ-ಮನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ಅ.5ರಂದು ನಡೆಯಿತು.

ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಶಾಸಕ ಅಶೋಕ್ ಕುಮಾರ್ ರೈರವರ ನೇತೃತ್ವದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅ.20 ರಂದು ‘ಇದು ಜನಸಾಮಾನ್ಯರ ನಾಡಿ ಮಿಡಿತ’ ಎಂಬ ಟ್ಯಾಗ್ ಲೈನ್ ನಡಿಯಲ್ಲಿ ನಡೆಯುತ್ತಿರುವ ಅಶೋಕ ಜನ-ಮನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈರವರು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಿಗೆ ಮತ್ತು ಭಕ್ತಾಧಿಗಳಿಗೆ ವಿತರಿಸಿದರು.
ಸಿಎಂ ಸಿದ್ಧರಾಮಯ್ಯ ಭಾಗವಹಿಸುವಿಕೆ ಜೊತೆಗೆ 1 ಲಕ್ಷ ಜನ ಸೇರುವ ನಿರೀಕ್ಷೆ-ನಿರಂಜನ್ ರೈ:
ಬಳಿಕ ಮಾತನಾಡಿದ ನಿರಂಜನ್ ರೈ ಮಠಂತಬೆಟ್ಟುರವರು, ಶಾಸಕ ಅಶೋಕ್ ರೈರವರು ಶಾಸಕರಾಗುವ ಮೊದಲೇ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ. ಭಾರತದ ಭಾವೈಕ್ಯತೆಯ ಪೂರಕವಾಗಿ ಜಾತಿ-ಧರ್ಮ ಮರೆತು ಒಂದೇ ಚಪ್ಪರದಡಿಯಲ್ಲಿ ಶಾಸಕ ಅಶೋಕ್ ರೈರವರು ಸಾರ್ವಜನಿಕ ಬಂಧುಗಳಿಗೆ ಉಡುಗೊರೆಯನ್ನು ನೀಡುವ ಮೂಲಕ ದೀಪಾವಳಿಯನ್ನು ಆಚರಿಸಲಾಗುತ್ತಿದೆ ಎಂದ ಅವರು ಶಾಸಕ ಅಶೋಕ್ ರೈರವರ ಈ ಜನ-ಮನ ಕಾರ್ಯಕ್ರಮವು ಪ್ರತಿ ಗ್ರಾಮ, ಗ್ರಾಮ ಮಟ್ಟದಲ್ಲಿ ಮುಟ್ಟಬೇಕು, ಗೌರವಪೂರ್ವಕವಾಗಿ ಜನ ಸೇರಬೇಕು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾಗವಹಿಸುವ ನಿರೀಕ್ಷೆಯಿದ್ದು, ಜೊತೆಗೆ ಸುಮಾರು ಒಂದು ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿ ಸರ್ವರ ಸಹಕಾರ ಕೋರಿದರು.
ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಸದಸ್ಯರಾದ ವಸಂತ ಕುಮಾರ್ ನಾಯ್ಕ, ಮಹೇಶ್ ಬಿ, ಲಲಿತಾ ಕೆ, ರೇಖಾ ಬಿ.ಎಸ್, ಸೂರಪ್ಪ ಗೌಡ, ಚಂದ್ರಶೇಖರ ಕಲ್ಲಗುಡ್ಡೆ, ರಕ್ಷಿತ್ ನಾಯ್ಕ್, ಸಿಬ್ಬಂದಿ ಭರತ್, ರಘುನಾಥ್ ಪೂಜಾರಿ, ನಗರಸಭೆ ನಾಮ ನಿರ್ದೇಶಿತ ಸದಸ್ಯ ಚಿದಾನಂದ ರೈ ಸಹಿತ ಹಲವರು ಭಕ್ತಾಧಿಗಳು ಉಪಸ್ಥಿತರಿದ್ದರು.