ಪುತ್ತೂರು: 2023ರ ನ.6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಜಾಮೀನು ಕೋರಿ 3ನೇ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಆರೋಪಿಗಳ ಪೈಕಿ 3ನೇ ಆರೋಪಿ ಮಂಜುನಾಥ್ ಅಲಿಯಾಸ್ ಹರಿ ಅನಾರೋಗ್ಯದ ಕುರಿತು ಉಲ್ಲೇಖಿಸಿ ಜಾಮೀನಿನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದ. ದೂರುದಾರ ವಿಖ್ಯಾತ್ ಪರ ಸರಕಾರಿ ಅಭಿಯೋಜಕರಾದ ಜಯಂತಿ ಸತೀಶ್ ಭಟ್ ಅವರು ವಾದಿಸಿ, ಆರೋಪಿಗೆ ಜಾಮೀನು ಮಂಜೂರು ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅವರ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.