ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯು ಅ.7ರಂದು ಎಪಿಎಂಸಿ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು.
ಸಂಸ್ಮರಣಾ ಜ್ಯೋತಿ ಬೆಳಗಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ಸಂದೇಶಗಳಿವೆ. ಜಾತ್ಯಾತೀತ ನೆಲೆಗಟ್ಟಿನಲ್ಲಿರುವ ಕಾಂಗ್ರೆಸ್ ಪಕ್ಷ ಅವರ ಚಿಂತನೆಗಳು ಪೂರಕವಾಗಿದೆ. ಸ್ವತಃ ದೇವಸ್ಥಾನ ನಿರ್ಮಿಸುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿದ್ದ ಅಸ್ಪೃಶ್ಯತೆಯನ್ನು ವಿರೋಧಿಸಿ ಎಲ್ಲರಿಗೂ ಪೂಜೆ ಮಾಡಲು ಅವಕಾಶ ನೀಡಿದವರು. ಪರಿವರ್ತನೆಯ ಹರಿಕಾರರಾಗಿ ಸಮಾಜದಲ್ಲಿ ನೀಡಿದ ಸಂದೇಶಗಳು ಸಮಾಜದ ಪರಿವರ್ತನೆಗೆ ಸಹಕಾರಿಯಾಗಿದೆ. ಗಾಂಧೀಜಿಯವರು ನಾರಾಯಣ ಗುರುಗಳ ಮೆಚ್ಚಿದ್ದರು. ಸಂಘಟನೆಯಿಂದ ಬಲೀಷ್ಠರಾಗಿ ಎಂಬ ಸಂದೇಶದಂತೆ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋನಪ್ಪ ಪೂಜಾರಿಯವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈಯವರ ಪುತ್ತೂರಿನ ಸರ್ವಾಂಗೀಣ ಅಭಿವೃದ್ಧಿ ಕಠಿ ಬದ್ದರಾಗಿದ್ದು ಅವರ ಕೆಲಸಗಳಿಗೆ ಪೂರಕವಾಗಿ ಪಕ್ಷದ ಜವಾಬ್ದಾರಿಯೂ ಬಹಳಷ್ಟಿದೆ. ಕಾಂಗ್ರೆಸ್ ಪಕ್ಷ ಬಲ ಬಲಪಡಿಸಿಲು ಹಿಂದುಳಿದ ವರ್ಗಗಳ ಕಾರ್ಯವೂ ಮುಖ್ಯ. ಮುಂಬರುವ ಎಲ್ಲಾ ಚುನಾವಣೆಗಳು ಹಾಗೂ ಪುತ್ತೂರಿನಲ್ಲಿ ಶಾಸಕರು ಮತ್ತೊಮ್ಮೆ ಗೆಲುವು ಸಾಧಿಸುವಲ್ಲಿ ಹಿಂದುಳಿದ ವರ್ಗವೂ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಗುರು ಸಂದೇಶ ನೀಡಿದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಮಾತನಾಡಿ, ದಾರ್ಶನಿಕರ ಜನ್ಮ ದಿನದ ಆಚರಣೆ ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಿರಬಾರದು. ಅವರ ತತ್ವ, ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ, ಮಕ್ಕಳಿಗೆ ತಿಳಿಸುವ ಕೆಲಸವಾಗಬೇಕು. ನಾರಾಯಣ ಗುರುಗಳ ಸಿದ್ದಾಂತ ವಿಶ್ವ ಮಾನ್ಯತೆ ಪಡೆದಿದೆ. ಹೀಗಾಗಿ ಸಿದ್ದರಾಮಯ್ಯನವರು ನಾರಾಯಣ ಗುರುಗಳ ಜಯಂತಿಯನ್ನು ಸರಕಾರಿ ಕಾರ್ಯಕ್ರಮ ಆಚರಿಸುವ ಮೂಲಕ ಗುರುಗಳಿಗೆ ಉನ್ನತ ಸ್ಥಾನಮಾನ ನೀಡಿದ್ದಾರೆ. ನಾರಾಯಣ ಗುರುಗಳ ತತ್ವ, ಸಿದ್ದಾಂತಗಳಿಗೆ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳು ಪೂರಕವಾಗಿದ್ದು ಸರ್ವರಿಗೂ ಸಮಪಾಲು, ಸಮಬಾಳು ತತ್ವದಲ್ಲಿ ಮುನ್ನಡೆಯುತ್ತಿದೆ. ಸಂಘರ್ಷ ರಹಿತ ಸಂಘಟನೆಯ ಕ್ರಾಂತಿಯ ರುವಾರಿಯಾಗಿರುವ ನಾರಾಯಣ ಗುರುಗಳ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಧರ್ಮ ಧರ್ಮಗಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸನಿಂತು ಸಾಮರಸ್ಯತೆ ನೆಲೆಯೂರಲು ಸಾಧ್ಯ ಎಂದು ಹೇಳಿದರು.
ನಾರಾಯಣ ಗುರುಗಳ ಭಾವಚಿತ್ರೆಕ್ಕೆ ಪುಷ್ಪಾರ್ಚನೆ ಮಾಡಿದ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ವಿವಿಧ ಸಾಮಾಜಿಕ ಪಿಡುಗಳ ವಿರುದ್ದ ದಾರ್ಶನಿಕರು ಕ್ರಾಂತಿ ನಡೆಸಿದ ಪರಿಣಾಮವಾಗಿ ಕಾಲ ಕಾಲಕ್ಕೆ ಸಮಾಜದಲ್ಲಿ ಪರಿವರ್ತನೆಯಾಗಿ ಪ್ರಸ್ತುತ ಸಾಮಾಜಿಕ ಸಮಾನತೆ ಕಾಣಬಹುದಾಗಿದೆ. ದೇಶದ ಅಭಿವೃದ್ಧಿಯಲ್ಲಿಯೂ ಯುಗ ಪುರುಷರ ಪಾತ್ರ ಮಹತ್ವ ಪಡೆದಿದೆ. ಹಿಂದುಳಿದ ವರ್ಗಗಳಲ್ಲಿಯೂ ಬಹುತೇಕ ಜಾತಿ ಸಮಾಜಗಳಿದ್ದು ಎಲ್ಲರನ್ನು ಒಟ್ಟು ಸೇರಿಸಿಕೊಳ್ಳಬೇಕು. ಹಿಂದುಳಿದ ವರ್ಗಗಳಲ್ಲಿ ಬಲೀಷ್ಠಗೊಳಿಸಿ ಮತ್ತೊಮ್ಮೆ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪಕ್ಷ ಸಮಾನತೆ ಕಾಯುವ ಪಕ್ಷವಾಗಿದ್ದು ಹಿಂದುಳಿದ ವರ್ಗ ಭದ್ರವಾಗಿ ಕಾಂಗ್ರೆಸ್ ಪಕ್ಷ ಬಲಿಷ್ಠಗೊಳಿಸಬೇಕು. ಹುದ್ದೆ ನಿರ್ವಹಿಸಲಾಗದವರು ಪಕ್ಷದಲ್ಲಿ ಹುದ್ದೆ ಬಿಡಬೇಕು ಎಂದು ತಿಳಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಮಾತನಾಡಿ, ಕಟ್ಟ ಕಡೆಯ ಸಮಾಜದಲ್ಲಿ ಹುಟ್ಟಿದ ನಾರಾಯಣ ಗುರುಗಳು ತನ್ನ ಸಂದೇಶದ ಮೂಲಕ ವಿಶ್ವಕ್ಕೆ ಗುರುವಾದವರು. ನಾರಾಯಣ ಗುರುಗಳು ಒಂದು ಸಮಾಜಕ್ಕೆ ಮಾತ್ರ ಗುರುಗಳಲ್ಲ. ಹಿಂದುಳಿದ ವರ್ಗದಲ್ಲಿ 27 ಸಮಾಜಗಳು ಕೂಡಿದ್ದು ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ನಾರಾಯಣ ಗುರುಗಳ ಜಯಂತಿಯನ್ನು ಉತ್ಸವದ ರೀತಿಯಲ್ಲಿ ಮಾಡುವ ಮೂಲಕ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದರು.
ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾತನಾಡಿ, ನಾರಾಯಣ ಗುರುಗಳು ಅಸ್ಪೃಶ್ಯತೆ ವಿರುದ್ಧ ಹೋರಾಡಿ ಸಮಾನತೆ ನೀಡಿದವರು. ನಮ್ಮೊಳಗೆ ಪರಸ್ಪರ ವೈಮನಸ್ಸು ಇರಬಾರದು. ಸಂಘಟನೆ ಗೆ ಎಲ್ಲರೂ ಸಹಕರಿಸುವ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಘರ್ಜಿಸುವಂತೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮೋನಪ್ಪ ಪೂಜಾರಿ ಕೆರೆಮಾರು ಅವರು, ಪಕ್ಷದ ವತಿಯಿಂದ ಪ್ರತಿವರ್ಷ ನಾರಾಯಣ ಗುರುಗಳ ಜಯಂತಿ ಆಚರಿಸಲಾಗುತ್ತಿದ್ದು ಈ ವರ್ಷ ಗುರುಪೂರ್ಣಿಮೆಯ ದಿನ ನಾರಾಯಣ ಗುರುಗಳ ಜಯಂತಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರು ಸಹಕರಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹೇಶ್ಚಂದ್ರ ಸಾಲ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹಿಂದುಳಿದ ವರ್ಗಗಳ ಘಟಕ ಕಾರ್ಯದರ್ಶಿ ಶಶಿದರ ಪೂಜಾರಿ ಸುರುಳಿಮೂಲೆ ವಂದಿಸಿದರು. ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.