ಪುತ್ತೂರು: 4 ತಿಂಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರ ಸಮೀಪ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡವರ ಪೈಕಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂಧಿಸದೆ ಅ.7ರಂದು ಮೃತಪಟ್ಟಿದ್ದಾರೆ.
ಖಾಸಗಿ ಬಸ್‌ವೊಂದು ಕಾರಿಗೆ ಡಿಕ್ಕಿಯಾದ ರಭಸಕ್ಕೆ ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ(30ವ) ಅವರು ಗಂಭೀರ ಗಾಯಗೊಂಡಿದ್ದರು.
ಈಶ್ವರ ಭಟ್ ಅವರ ಮೊಮ್ಮಗಳು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದರು. ಗಂಭೀರ ಗಾಯಗೊಂಡಿದ್ದ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ನಡುವೆ ಈಶ್ವರ ಭಟ್ ಅವನ್ನು ಪುತ್ತೂರು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪೂರ್ವ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.