ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಅವರಿಗೆ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ : ಅಭಿನಂದನೆ

0

ಪುತ್ತೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈಯವರು ಗಾಂಧಿ ಚಿಂತನ ವೇದಿಕೆ ಸುಳ್ಯ ಇದರ ವತಿಯಿಂದ ಗಾಂಧಿ ಜಯಂತಿ ಸಂದರ್ಭ ನೀಡಲಾಗುವ ರಾಜ್ಯ ಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅವರನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವೊಕೇಟ್ ಅಶ್ವಿನ್ ಎಲ್.ಶೆಟ್ಟಿ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ರಶ್ಮಿ ಅಶ್ವಿನ್ ಶೆಟ್ಟಿ ಹಾಗೂ ಸಂಚಾಲಕರ ಪತ್ನಿ ಕಸ್ತೂರಿ ಕಲಾ ಎಸ್ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here