ಪರಿಹರಿಸುವಂತೆ ಎಂಎಲ್‌ಸಿ ಕಿಶೋರ್ ಕುಮಾರ್‌ರಿಂದ ಪಂಚಾಯತ್ ರಾಜ್ ಆಯುಕ್ತರಿಗೆ ಮನವಿ
ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳು ಪ್ರಸ್ತುತ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಕೊಡುವಂತೆ ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್ ಪುತ್ತೂರುರವರು ಪಂಚಾಯತ್ ರಾಜ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ನಮೂನೆ 9 & 11 ಎ ಮತ್ತು 11-ಬಿ ಪ್ರಮಾಣ ಪತ್ರ ವಿತರಣೆ, ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ತೊಂದರೆಗಳು (ಉದಾ ನಮೂನೆ 11-ಬಿ ವಿತರಣೆಗೆ,ನಮೂನೆ 9 & 11 ಎ ರಿಂದ 11-ಬಿ ಗೆ ಬದಲಾವಣೆಗೆ ಮತ್ತು ವಸತಿ ಯೋಜನೆಯಡಿ ನೀಡಲಾದ ಮನೆಗಳಿಗೆ ಕದ ನಂಬ್ರ ವಿತರಿಸಲು ಅವಕಾಶವಿಲ್ಲದಿರುವುದು ಇತ್ಯಾದಿ ) ಗ್ರಾಮ ಪಂಚಾಯತ್ ರಸ್ತೆ ಸ್ವಾಧೀನತೆಗೆ ಇರುವ ತಾಂತ್ರಿಕ ಅಡಚಣೆಗಳು, ಉಭಯ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಸಿಬ್ಬಂದಿ ಹುದ್ದೆಗೆ ನೇಮಕಾತಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಾರ್ಯದರ್ಶಿ ಗ್ರೇಡ್ -2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಮುಂಬಡ್ತಿ ಮುಂತಾದ ಹಲವಾರು ಸಮಸ್ಯೆಗಳನ್ನು ಕೂಡಲೆ ಸರಿಪಡಿಸುವಂತೆ ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್ ಪುತ್ತೂರು ರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತ್ ರಾಜ್ ಆಯುಕ್ತರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.
ಸಚಿವರೊಂದಿಗೆ ಚರ್ಚಿಸಿ, ಶೀಘ್ರದಲ್ಲಿ ಈ ಕುರಿತು ಸೂಕ್ತ ಕ್ರಮಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದ್ದಾರೆ.