- ಪುತ್ತೂರು : ವೀರಮಂಗಲ ಪಿಎಂಶ್ರೀ ಶಾಲೆಯ ವಾರ್ಷಿಕೋತ್ಸವ ನ. 15 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಶಾಲಾ ಸಭಾಂಗಣದಲ್ಲಿ ಅ. 8 ರಂದು ನಡೆಯಿತು.

- ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿಚಂದ್ರ ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ಎಸ್ ವೀರಮಂಗಲ, ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಊರವರು ಪೋಷಕರು ಉಪಸ್ಥಿತರಿದ್ದರು. ಮುಖ್ಯಗುರು ತಾರಾನಾಥ ಸವಣೂರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕಿ ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.