ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಮೊಕ್ತೇಸರ, ಪ್ರಗತಿಪರ ಕೃಷಿಕ ಮೋಹನ್ ರೈ ಓಲೆಮುಂಡೋವು ಅವರು 12 ಕಿಂಟ್ವಾಲ್ ಅಕ್ಕಿ ಮತ್ತು 5 ಲೀಟರ್ ಶುದ್ದ ಎಳ್ಳೆಣ್ಣೆ ಸಮರ್ಪಣೆ ಮಾಡಿದರು.

ಮೋಹನ್ ರೈ ಓಲೆಮುಂಡೋವು ಅವರು ದಂಪತಿ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರ ಕೋರಿಕೆಯಂತೆ ದೇವಸ್ಥಾನಕ್ಕೆ ಅಕ್ಕಿ ಮತ್ತು ಎಳ್ಳೆಣ್ಣೆ ಸಮರ್ಪಣೆ ಮಾಡಿದ್ದಾರೆ.
ದೇವಳದ ವತಿಯಿಂದ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥಿಸಿ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಶಾಲು ಹಾಕಿ ಗೌರವಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ ಈ ಸಂದರ್ಭ ಉಪಸ್ಥಿತರಿದ್ದರು.