ಪುತ್ತೂರು; ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಗೃತಿ ವೇದಿಕೆ ಟ್ರಸ್ಟ್ ದ.ಕ ಜಿಲ್ಲೆಯ ವತಿಯಿಂದ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಅ.15ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಗಾಂಧೀಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶದ ಆಮಂತ್ರಣ ಪತ್ರಿಕೆಯು ಅ.10ರಂದು ಬಿಡುಗಡೆಗೊಂಡಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಸವಣೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ತಾಲೂಕು ಯೋಜನಾಧಿಕಾರಿಗಳಾದ ಪುತ್ತೂರಿನ ಶಶಿಧರ ಎಂ., ಸುಳ್ಯದ ಮಾಧವ, ಕಡಬದ ಪ್ರಕಾಶ್, ವಿಟ್ಲದ ಸುರೇಶ್, ಕಾಸರಗೋಡಿನ ದಿನೇಶ್, ಮಂಜೇಶ್ವರದ ಶಶಿಕಲಾ, ವಲಯ ಮೇಲ್ವಿಚಾರಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.