
ಕಾಣಿಯೂರು: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ರಜತಾದ್ರಿ ಮಣಿಪಾಲ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಸಾಣೂರು ಕಾರ್ಕಳ ಇವರ ಸಹಯೋಗದಲ್ಲಿ ಅ 9, 10 ರಂದು ಮೈಸೂರು ವಿಭಾಗ ಮಟ್ಟದ 17 ರ ವಯೋಮಾನದ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರೀಮಾ ಕೆ.ಎಚ್ (9ನೇ) ಸಾಂಪ್ರದಾಯಿಕ ಯೋಗಾಸನದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ಕೆ ತರಬೇತು ನೀಡಿರುತ್ತಾರೆ.