ಬಡಗನ್ನೂರು : ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಅ.18 ಶನಿವಾರ ಸಂಜೆ ಗಂ 5 ಕ್ಕೆ ಮಂಗಳೂರು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗಣ್ಯಾತಿಗಣ್ಯರ ಹಾಗೂ ಅತಿಥಿಗಳ ಉಪಸ್ಥಿತಿಯಲ್ಲಿ ಬಿಡುಗಡೆಗೊಳ್ಳಲಿದೆ.
ಕ್ಷೇತ್ರಾಢಳಿತ ಸಮಿತಿ ಸದಸ್ಯರು ಹಾಗೂ ಟ್ರಸ್ಟಿನ ಸದಸ್ಯರು ಮತ್ತು ಪ್ರಮುಖರು ಸಕಾಲದಲ್ಲಿ ಭಾಗವಹಿಸುವಂತೆ ಕ್ಷೇತ್ರಾಢಳಿತ ಸಮಿತಿ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಅಧ್ಯಕ್ಷ ರವಿಪೂಜಾರಿ ಚಿಲಿಂಬಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.