ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಶುದ್ದ ಎಳ್ಳೆಣ್ಣೆ ಅಭಿಷೇಕ ಹಾಗೂ ವಿಶೇಷ ಪ್ರಾರ್ಥನೆ ನಡೆಯಿತು.

ಈ ಬಾರಿ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಇದಾಗಿದ್ದು ಈ ಬಾರಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ಸುಮಾರು 1 ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹೊಸ ಮೆರುಗು ಬಂದಿದ್ದು ,ಒಟ್ಟಾರೆಯಾಗಿ ಕಾರ್ಯಕ್ರಮ ಯಶಸ್ವಿಗಾಗಿ ಶಾಸಕರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಸಮಿತಿ ಸದಸ್ಯರಾದ ವಿನಯ,ಮಹಾಬಲ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.