ಪುತ್ತೂರು: ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ.

ಆಟೋ ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.