




ನೆಲ್ಯಾಡಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು, ಶಾಲಾ ಶಿಕ್ಷಣ ಇಲಾಖೆ ತುಮಕೂರು ಇದರ ಆಶ್ರಯದಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಿದ್ದ ಉಜಿರೆ ಎಸ್ಡಿಎಂ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು ತಂಡದ ಆಟಗಾರ ಕೊಣಾಲು ನಿವಾಸಿ ಕಾರ್ತಿಕ್ ಅವರು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.



ಉಜಿರೆ ಎಸ್ಡಿಎಂ ಕಾಲೇಜು ವಿದ್ಯಾರ್ಥಿಯಾಗಿರುವ ಕಾರ್ತಿಕ್ ಅವರು ಕೊಣಾಲು ಗ್ರಾಮದ ಅಂಬರ್ಜೆ ನಿವಾಸಿ ನೋಣಯ್ಯ ಪೂಜಾರಿ ಹಾಗೂ ಶೋಭಾರವರ ಮಗ.












