ನಿಡ್ಪಳ್ಳಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಾರಥ್ಯದಲ್ಲಿ ನ.29-30 ರಂದು ಪುತ್ತೂರಿನಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಆಮಂತ್ರಣ ಪತ್ರ ವಿತರಣಾ ಕಾರ್ಯಕ್ರಮ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ವಠಾರದಲ್ಲಿ ಅ.19 ರಂದು ಜರಗಿತು.
ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮದ ಒಟ್ಟು ರೂಪು ರೇಷೆಗಳ ಬಗ್ಗೆ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಯಾಚಿಸಿದರು.
ಕಾರ್ಯಕ್ರಮದ ಹೊರೆಕಾಣಿಕೆ ಸಮಿತಿಯ ಸಂಚಾಲಕ ಅನಿಲ್ ಕಣ್ಣಾರ್ನೂಜಿ ಮಾತನಾಡಿ, ಹೊರಕಾಣಿಕೆ ಸಮರ್ಪಣಾ ಸಮಯದಲ್ಲಿ ಪ್ರತಿ ಮನೆಯಿಂದ ಒಂದೊಂದು ಬಗೆಯ ಸುವಸ್ತುಗಳನ್ನಾದರೂ ನೀಡಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ವಿನಂತಿಸಿದರು. ಪಾಣಾಜೆ ಸಿ.ಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಬೋರ್ಕರ್ ಮಾತನಾಡಿ ಶುಭ ಹಾರೈಸಿದರು.
ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ ಸ್ವಾಗತಿಸಿದರು. ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ರೂಪೇಶ್ ನಾಯ್ಕ್, ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್, ಪ್ರೇಮ್ ರಾಜ್ ಆರ್ಲಪದವು, ಸುಜಿತ್ ಕಜೆ ಬೆಟ್ಟಂಪಾಡಿ ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡರು.