ಸವಣೂರು: ದ.ಕ.ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಇದರ ವತಿಯಿಂದ ಮಂಗಳೂರು ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಅ.19ರಂದು ನಡೆದ ದ.ಕ.ಜಿಲ್ಲಾ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸವಣೂರು ಗ್ರಾಮದ ಕೇಕುಡೆ ನಿವಾಸಿ ಪುಷ್ಪಾವತಿ ಕೇಕುಡೆ ಅವರು ಹಲವು ಬಹುಮಾನ ಪಡೆದುಕೊಂಡಿದ್ದಾರೆ.

ಪುಷ್ಪಾವತಿ ಕೇಕುಡೆ ಅವರು 800 ಮೀ. ಓಟದಲ್ಲಿ ಪ್ರಥಮ,400 ಮೀ ಓಟದಲ್ಲಿ ದ್ವಿತೀಯ, ಡಿಸ್ಲಸ್ ಥ್ರೋನಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಪುಷ್ಪಾವತಿ ಕೇಕುಡೆ ಅವರು ಪ್ರಸ್ತುತ ಪುತ್ತೂರು ತಾಲೂಕು ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾಗಿದ್ದು,ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪೋಷಕರ ಸಮಿತಿ ಮತ್ತು ಸವಣೂರು ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.