ಬಡಗನ್ನೂರು: ಪಡುಮಲೆ ಪಿಲಿಮಾಡ ದೖೆವಸ್ಥಾನದ ಜಿರ್ಣೋದ್ದಾರ ಕಾರ್ಯ ಹಾಗೂ ಜಾತ್ರಾ ಸಂದರ್ಭದಲ್ಲಿ ಶ್ರೀ ದೈವಗಳು ಶ್ರೀ ದೇವರನ್ನು ಭೇಟಿ ವಿಚಾರಗಳ ಪ್ರಯುಕ್ತ ದೈವಜ್ಞರಾದ ಬಾಲಕೃಷ್ಣ ನಾಯರ್ ಮೈಲಟ್ಟಿ ರವರ ನೇತೃತ್ವದಲ್ಲಿ ಒಂದು ದಿವಸದ ಪ್ರಶ್ನಾಚಿಂತನೆ ಅ. 24 ರಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆ ಹಾಗೂ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರ ಚಾಮುಂಡಿ (ರಾಜನ್ ದೈವ) ದೈವಸ್ಥಾನ, ಬದಿನಾರ್ ಪಡುಮಲೆ. ರವರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.