





ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ನೂಜಿಬಾಳ್ತಿಲ ಹಾಗೂ ಬೆಥನಿ ಸಂಯುಕ್ತ ಪ.ಪೂ. ಕಾಲೇಜು ನೂಜಿಬಾಳ್ತಿಲ ಇವುಗಳ ಆಶ್ರಯದಲ್ಲಿ ಕಡಬ ವಲಯ ಮಟ್ಟದ ಕ್ರೀಡಾಕೂಟ ಜರುಗಿತು.


ಈ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ವಿವೇಕ್ ಎರ್ದಡ್ಕ (ಎರ್ದಡ್ಕ ಮಾಧವ ಹಾಗೂ ರೂಪ ಎಂ. ದಂಪತಿ ಪುತ್ರ) ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ವಿಶ್ವಾಸ್ ದೇವಾಡಿಗ (ಕಂದ್ಲಾಜೆ ಗಣೇಶ್ ದೇವಾಡಿಗ ಹಾಗೂ ಅಶ್ವಿನಿ ದಂಪತಿ ಪುತ್ರ) ಚಕ್ರ ಎಸೆತ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈತ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ತೃತೀಯ ಚಾಂಪಿಯನ್ ಶಿಪ್ ಪಡೆದುಕೊಂಡಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಮಾರ್ಗದರ್ಶನ ನೀಡಿದ್ದಾರೆ.















