





ಪುತ್ತೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಉಪಸ್ಥಿತರಿದ್ದರು.














