





ಪುತ್ತೂರು: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(KARTET)ಯ ಒಂದು ದಿನದ ಪೂರ್ವ ತಯಾರಿ ತರಬೇತಿ ಕಾರ್ಯಾಗಾರವು ನವೆಂಬರ್ 9ರಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ನಡೆಯಲಿದೆ.


ತರಬೇತಿ ಕಾರ್ಯಾಗಾರವು ಸಂಪೂರ್ಣ ಉಚಿತವಾಗಿರಲಿದ್ದು. ತರಬೇತಿಯಲ್ಲಿ ನುರಿತ ತರಬೇತುದಾರರು ಪರೀಕ್ಷೆಯ ಪತ್ರಿಕೆ-I ಮತ್ತು ಪತ್ರಿಕೆ-II ಪ್ರಶ್ನೆ ಪತ್ರಿಕೆಗಳ ಬಗ್ಗೆ ವಿಸ್ಕೃತ ಮಾಹಿತಿಯನ್ನು ನೀಡಲಿದ್ದಾರೆ. ಸರಕಾರಿ/ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಲು TET ಅರ್ಹತೆಯು ಅನಿವಾರ್ಯವಾಗಿರುವುದನ್ನು ಮನಗಂಡು ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ KARTET ಪೂರ್ವ ಸಿದ್ದತಾ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಇನ್ನಷ್ಟು ಆಕಾಂಕ್ಷಿ ಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಲು ಪ್ರಕಟಣೆ ತಿಳಿಸಿದೆ.





ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತಾ ಅಕಾಡೆಮಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ& ಖಾಸಗಿ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ, ಮೊದಲ ಮಹಡಿ ಹಿಂದೂಸ್ತಾನ್ ಕಾಂಪ್ಲೆಕ್ಸ್, APMC ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ 574201 PH: 9148935808 / 9448527606










