





ಉಪ್ಪಿನಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ(ಪದವಿಪೂರ್ವ) ಮತ್ತು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 30ರಂದು ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಹಸನ್ ವದೂದ್.ಹೆಚ್ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕೊಡಿಪ್ಪಾಡಿ ನಿವಾಸಿ ಹಿದಾಯತುಲ್ಲಾ ಹಾಗೂ ತಸ್ನೀಮಾ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಿನಾಥ್, ವಿದ್ಯಾ, ಶ್ರೀರಂಜಿನಿ ತರಭೇತಿ ನೀಡಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಕೆ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







 
            
