





ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.


ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ ಅವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೋಭಾ ಖಂಡಿಗ, ಎಸ್ ಡಿ ಎಂ ಸಿ ಸದಸ್ಯರುಗಳಾದ ಲೋಕೇಶ್ ಅಭಿಕಾರ, ಕೃಷ್ಣಪ್ಪ ಮುದುವ, ಮಮತಾ ಮುದುವ, ಮೋಹಿನಿ ಬಾಕಿಲ, ಗೌರವ ಶಿಕ್ಷಕಿ ಶಿಶ್ಮಿತಾ ರೈ, ಸುಮಲತ, ಸಹ ಶಿಕ್ಷಕ ಸುನಿಲ್ ಕನ್ನಡ ರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಮುಖ್ಯಗುರು ಪದ್ಮಯ ಗೌಡ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕಿ ನಂದಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.















