





ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.1ರಂದು 70ನೇ ಕನ್ನಡ ರಾಜ್ಯೋತ್ಸವ ಹಾಗೂ ಸಿಸ್ಕೋ ಸ್ವಯಂ ಸೇವಕರಿಂದ “ಸಿಸ್ಕೊ ಸಂಭ್ರಮ” ಕಾರ್ಯಕ್ರಮ ನಡೆಯಿತು.


ಬೆಳಗ್ಗೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ನಂತರ ಸಿಸ್ಕೋ ಕಂಪನಿಯವರು ಎಂಟನೇ ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ, ಡಿಜಿಟಲ್ ಹಣ ಮತ್ತು ಫ್ರಾಡ್ ಡಿಟೆಕ್ಷನ್ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಚೆಸ್ ತರಬೇತಿಯನ್ನು ನೀಡಿದರು. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಸಮಯ ನಿರ್ವಹಣೆ ಮತ್ತು ಪರೀಕ್ಷೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಸಿದರು. ವಿದ್ಯಾರ್ಥಿಗಳಿಗೆ ಶಾರ್ಕ್ ಟ್ಯಾಂಕ್ ಪ್ರೆಸೆಂಟೇಶನ್ ಹಾಗೂ ರಸಪ್ರಶ್ನೆ ಕಾರ್ಯಕ್ರಮವೂ ನಡೆಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು.





ಶಾಲಾ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನ ನೀಡಿದರು. ಭೋದಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.









